ಅಭಿಪ್ರಾಯ / ಸಲಹೆಗಳು

ನಿರ್ದೇಶಕರ ಸಂದೇಶ

 

 

 

 

 

ನಿರ್ದೇಶಕರ ಸಂದೇಶ

 

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿದ್ದು, ರೋಗಿಗಳ ಆರೈಕೆ ಹಾಗೂ ಸಂಸ್ಥೆಯ ಪ್ರಗತಿಗೆ ಶ್ರಮಿಸುತ್ತಿರುವ ಎಲ್ಲಾ ಸಿಬ್ಬಂದಿಗಳು ವೈದ್ಯರಿಗೆ ನನ್ನ ಅಭಿನಂದನೆಗಳು. ರಾಜ್ಯ ಸರ್ಕಾರ ಹಾಗೂ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್) ನೆರವಿನಿಂದ ಕಾರ್ಪೊರೇಟ್ ಆಸ್ಪತ್ರೆ ಸ್ವರೂಪ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ವಿಶ್ವದರ್ಜೆಯ ಚಿಕಿತ್ಸೆ ಒದಗಿಸಲು ಅತ್ಯಾಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡಿದೆ.

 

1973ರಲ್ಲಿ ಆರಂಭವಾದ ಸಂಸ್ಥೆಯಲ್ಲಿ ಪ್ರತಿವರ್ಷ 3 ಲಕ್ಷಕ್ಕೂ ಅಧಿಕ ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. 23 ಎಕರೆಯಲ್ಲಿರುವ ಸಂಸ್ಥೆಯು ದಾನಿಗಳ ನೆರವಿನಿಂದ ಹೈಟೆಕ್ ಸ್ಪರ್ಷ ಪಡೆದಿದೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು (ಕೆಎಂಐಒ) ರೋಗಿಗಳಿಗೆ  ಉನ್ನತ ದರ್ಜೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸುತ್ತಿದೆ. ಕ್ಯಾನ್ಸರ್ ಕುರಿತ ಸಂಶೋಧನೆ, ಶಿಕ್ಷಣ ಮತ್ತು ಸಂಶೋಧನಾ ಚಟುವಟಿಕೆಗಳಿಗೆ ನೀಡಲಾಗಿರುವ ಮಹತ್ವವನ್ನು ಹಾಗೂ ಜಿಲ್ಲಾಮಟ್ಟದಲ್ಲಿ ಕ್ಯಾನ್ಸರ್ ಆರೈಕೆಗಾಗಿ ರೂಪಿಸುತ್ತಿರುವ ಸೇವಾಸೌಲಭ್ಯಗಳ ಕುರಿತು ನಮ್ಮ ಸಂಸ್ಥೆ ವೆಬ್‌ಸೈಟ್‌ನಲ್ಲಿ ಸಂಪೂರ್ಣ ಮಾಹಿತಿ ಒದಗಿಸಲಾಗಿದೆ. ವೈದ್ಯಕೀಯ ವಿಜ್ಞಾನವು ವೇಗವಾಗಿ ಮುಂದುವರೆಯುತ್ತಿದೆ. ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು ಪಾಶ್ಚಿಮಾತ್ಯ ದೇಶಗಳಿಗೆ ಸರಿಸಮನಾಗಿ ಅತ್ಯಾಧುನಿಕ ಕ್ಯಾನ್ಸರ್ ಆರೈಕೆ ಮತ್ತು ತಂತ್ರಜ್ಞಾನ ಆಧಾರಿತ ಸೇವೆಯನ್ನು ಒದಗಿಸುತ್ತಿದೆ. ಕ್ಯಾನ್ಸರ್ ಚಿಕಿತ್ಸೆಗಾಗಿ ಇತ್ತೀಚಿನ ಮತ್ತು ಆಧುನಿಕ ಸಲಕರಣೆಗಳನ್ನು ಕಿದ್ವಾಯಿ ಸಂಸ್ಥೆಯಲ್ಲಿ ಸಜ್ಜುಗೊಳಿಸುವ ಪ್ರಕ್ರಿಯೆಯಲ್ಲಿ ನಾವು ತೊಡಗಿಸಿಕೊಂಡಿದ್ದೇವೆ. ಆ ಮೂಲಕ ಕ್ಯಾನ್ಸರ್ ನಿರ್ಮೂಲನೆಗಾಗಿ ಕಠಿಣ ಪ್ರಯತ್ನ ಮಾಡುತ್ತಿದ್ದೇವೆ.

 

ಕ್ಯಾನ್ಸರ್ ರೋಗಿಗಳ ಸಂಖ್ಯೆ ದಿನೇದಿನೇ ಹೆಚ್ಚಾಗುತ್ತಿರುವ ಈ ಸಂದರ್ಭದಲ್ಲಿ, ಕ್ಯಾನ್ಸರ್ ಬಗ್ಗೆ ಜನಜಾಗೃತಿ ಮೂಡಿಸುವಲ್ಲಿ, ಕ್ಯಾನ್ಸರ್ ತಡೆಗಟ್ಟುವಿಕೆಯಲ್ಲಿ ಮತ್ತು ಆರಂಭಿಕ ಪತ್ತೆಹಚ್ಚುವಿಕೆಯಲ್ಲಿ ಸದಾ ಮುಂಚೂಣಿಯಲ್ಲಿದ್ದೇವೆ. ರಾಜ್ಯ ಸರ್ಕಾರ ಎಲ್ಲ ರೀತಿಯ ಸಹಾಯ, ಸಹಕಾರ ಮತ್ತು ಸಹಭಾಗಿತ್ವ ನೀಡುತ್ತಿರುವುದು ಶ್ಲಾಘನೀಯ. ಸಂಸ್ಥೆಯ ಏಳಿಗೆಗೆ ಶ್ರಮಿಸುತ್ತಿರುವ ಆಡಳಿತ ಮಂಡಳಿ ಸಿಬ್ಬಂದಿಗಳು, ವೈದ್ಯರು, ನರ್ಸ್‌ಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಗುತ್ತದೆ. ರಾಜ್ಯದ ಜನತೆಯ ಆರೋಗ್ಯ ಕಾಪಾಡುವುದು ನಮ್ಮ ಮೊದಲ ಧ್ಯೇಯ.

 

 

ತುಂಬುಹೃದಯದ ಧನ್ಯವಾದಗಳೊಂದಿಗೆ, 

 

 

 

ಡಾ:  ಸೈಯದ್  ಅಲ್ತಾಫ್

ನಿರ್ದೇಶಕರು

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ

 

 

 

ಇತ್ತೀಚಿನ ನವೀಕರಣ​ : 08-02-2024 04:00 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ - ಬೆಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080